ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ – ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ.ಆರ್.ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನದಲ್ಲಿ ಇಂದಿನಿಂದ 2 ದಿನಗಳ ಕಾಲ ಆಯೋಜಿಸಿರುವ “ಉದ್ಯೋಗ ಮೇಳ” ಇದರ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಎಂ.ಆರ್.ಜಿ ಗ್ರೂಪ್ ನ ಆಡಳಿತ ನಿರ್ದೇಶಕರಾದ ಬಂಜಾರ ಪ್ರಕಾಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಮನೋಹರ್ ಶೆಟ್ಟಿ, ಯೋಗೀಶ್ ಶೆಟ್ಟಿ ಮತ್ತು ಸುಜ್ಲಾನ್ ಸಂಸ್ಥೆಯ ನಿರ್ದೇಶಕರಾದ ಅಶೋಕ್ ಶೆಟ್ಟಿ ಹಾಗೂ ಉದ್ಯಮಿಗಳು ಉಪಸ್ಥಿತರಿದ್ದರು.

