ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡಿನ ಸಮುದ್ರ ತೀರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಕಡಲ್ಕೊರೆತದ ಭೀತಿಯಿಂದ ಆತಂಕದಿಂದ ದಿನಗಳೆಯುವ ಪರಿಸ್ಥಿತಿ ಉಂಟಾಗಿದೆ. ಪ್ರತಿಭಟನೆಯಲ್ಲಿ ಕಾಪು ಶಾಸಕರು ವಿನಯಕುಮಾರ್ ಸೊರಕೆ ಮಾತನಾಡಿ ಈ ಪರಿಸರದಲ್ಲಿ ಈ ಹಿಂದೆ ಸಮುದ್ರ ದಡದಲ್ಲಿ ಹಾಕಲಾಗಿದ್ದ ತಡೆಗೋಡೆಯನ್ನು ತೆರವುಗೊಳಿಸಿ, ಹೊಸತಾಗಿ ಸದೃಢವಾದ ತಡೆಗೋಡೆ ನಿರ್ಮಿಸಿಕೊಡುತ್ತೇವೆ ಎಂದು ವಾಗ್ದಾನ ಮಾಡಿ ಯಾವುದೇ ರೀತಿಯ ಕಾಮಗಾರಿಯನ್ನು ಕೈಗೊಳ್ಳದ ಪರಿಣಾಮ ಇದೀಗ ಈ ಪರಿಸರದ 8ರಿಂದ 10 ಮನೆಗಳು ಮತ್ತು ಹಲವಾರು ತೆಂಗಿನಮರಗಳು ನೀರುಪಾಲಾಗುವ ಹಂತದಲ್ಲಿದ್ದು, ನಿವಾಸಿಗಳು ಆತಂಕದಿಂದ ಜೀವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಸಮಸ್ಯೆಗೆ ಎರಡು ದಿನದಲ್ಲಿ ಪರಿಹಾರ ನೀಡದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು ಈ ಹಿಂದೆ ಕೂಡಾ ಸ್ಥಳೀಯ ನಿವಾಸಿಗಳು ಈ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿಯವರಿಗೆ, ಕಾರ್ಯನಿರ್ವಾಹಕ ಅಭಿಯಂತರ ರಿಗೆ ಮತ್ತು ಗುತ್ತಿಗೆದಾರರಿಗೆ ಕರೆಮಾಡಿ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದು, ಎಲ್ಲರೂ ಶೀಘ್ರದಲ್ಲೇ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರಾರಂಭಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಇದೀಗ 3 ತಿಂಗಳು ಕಳೆದರೂ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವ ಕಾರಣ ಮತ್ತು ಮಳೆಗಾಲವು ಪ್ರಾರಂಭವಾಗಿದ್ದು ಸ್ಥಳೀಯ ನಿವಾಸಿಗಳು ತಮ್ಮ ಮನೆ-ಮರಗಳು ಸಮುದ್ರ ಪಾಲಾಗುವ ಭೀತಿಯಿಂದ ತಂಕಕ್ಕೊಳಗಾಗಿದ್ದಾರೆ.ಪರಿಸ್ಥಿತಿಯ ಗಂಭೀರತೆಯನ್ನು ಸ್ಥಳೀಯ ಶಾಸಕರ ಮತ್ತು ಸಂಸದರ ಗಮನಕ್ಕೂ ತರಲಾಗಿದ್ದು ಈ ವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ, ಸ್ಪಂದನೆ ನೀಡದೇ ನಿರ್ಲಕ್ಷಿಸಿರುವುದರಿಂದ ಸಂತ್ರಸ್ತ ಸ್ಥಳೀಯ ನಿವಾಸಿಗಳು ಸಾರ್ವಜನಿಕರ ಸಹಭಾಗಿತ್ವದಲ್ಲಿ ಪ್ರತಿಭಟನೆ ನಡೆಯಿತು ಪ್ರತಿಭಟನೆಯಲ್ಲಿ ಮಾಜಿ ಕಾಪು ಶಾಸಕರು ವಿನಯಕುಮಾರ್ ಸೊರಕೆ ಲವ ಕರ್ಕೇರ ರಾಜೇಶ್ ಮೆಂಡನ್ ಫರ್ಜಾನ, ,ಶೋಭಾ ಎ ಬಂಗೇರ ಮುಂತಾದವರು ಭಾಗವಹಿಸಿದರು


