ಉಡುಪಿ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿದ ಸಚಿವರು ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಮಹತ್ವವನ್ನು ಅನುಷ್ಠಾನ ಸಮಿತಿಗಳು ಜನರಿಗೆ ಮುಟ್ಟಿಸಲಿ, ರಾಜ್ಯದ ಯೋಜನೆಗಳು ಜನರಿಗೆ ತಲುಪುವಂತಾಗಲಿ ಬೇರೆ ರಾಜ್ಯಗಳಲ್ಲೂ ನಮ್ಮ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ಜಾರಿಗೆ ತರಲಾಗುತ್ತಿದೆ. ಭಾರತದ ಬದಲಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ ದೇಶದ ಇತಿಹಾಸದಲ್ಲಿಯೇ ಜನರ ಜೀವನದಲ್ಲಿ ಆರ್ಥಿಕವಾಗಿ ಸಬಲೀಕರಣ ಮಾಡಲು ಯಶಸ್ವಿಯಾಗಿದ್ದರೆ ಅದು ಸಿದ್ದರಾಮಯ್ಯ ನವರ ಸರಕಾರ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ದಿನಕರ್ ಹೇರೂರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ , ಕಾಂಗ್ರೆಸ್ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ಕಾಂಚನ್, ಎಂಎ ಗಫೂರ್, ದಿನೇಶ್ ಹೆಗ್ಡೆ, ಲಾವಣ್ಯ ಬಲ್ಲಾಳ್ ಸುನಿಲ್ ಬಂಗೇರ ಪ್ರಭಾಕರ ಆಚಾರ್ಯ ಸುಧೀರ್ ಹೆಜಮಾಡಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.



