×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆ.ಡಿ.ಪಿ) ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 30-11-2024 ರಂದು ಉಡುಪಿ ಜಿಲ್ಲಾ ಪಂಚಾಯತ್ ಡಾll ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಕೊರಗ ಸಮುದಾಯದ ಸಮಗ್ರ ಸಮಸ್ಯೆಗಳ ಪರಿಹಾರದ ಬಗ್ಗೆ ಕಿಂಡಿ ಅಣೆಕಟ್ಟು ನಿರ್ವಹಣೆ ಬಗ್ಗೆ ಬಿಪಿಎಲ್ ಕಾರ್ಡ್/ ಪಡಿತರ ಚೀಟಿ ತಾಂತ್ರಿಕ ಸಮಸ್ಯೆ ಜೊತೆಗೆ ಅನರ್ಹ ಪಡಿತರ ಚೀಟಿಗಳನ್ನು ಪುನರ್ ಪರಿಶೀಲಿಸುವ ಬಗ್ಗೆ 94 ಸಿ 94 ಸಿ.ಸಿ ಅಡಿಯಲ್ಲಿ ಸಲ್ಲಿಸಿರುವ ಅರ್ಜಿಯ ಶೀಘ್ರ ವಿಲೇವಾರಿ ಬಗ್ಗೆ ಡೀಮ್ಡ್ ಹಾಗೂ ಬಾಗಶಹ ಡೀಮ್ಡ್ ಪ್ರದೇಶದಲ್ಲಿ ವಾಸ್ತವ್ಯವಿರುವ ಫಲಾನುಭವಿಗಳಿಗೆ ತಕ್ಷಣವೇ ಹಕ್ಕು ಪತ್ರ ನೀಡುವ ಬಗ್ಗೆ ಜಿಲ್ಲೆಯಲ್ಲಿ 9&11 ಅನುಮೋದನೆಗೆ ಪ್ರಾಧಿಕಾರದಿಂದ ವಿಳಂಬವಾಗುತ್ತಿದ್ದು ಕಾಲಮಿತಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಲು ಸಂಬಂಧಿಸಿದ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ನಾಯಕ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *