×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಡಿ.25 ಅಮಿತ್ ಶಾ ನ ಪ್ರತಿಕ್ರತಿ ದಹನ ಹಾಗೂ ಮನುಸ್ಮೃತಿ ಸುಡುವ ಕಾರ್ಯಕ್ರಮ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ಉಡುಪಿ ಹಾಗೂ ಪ್ರಗತಿಪರ ಸಂಘಟನೆಗಳು ಉಡುಪಿ ಜಿಲ್ಲೆ ಇವರ ವತಿಯಿಂದ ಇದೇ ಬರುವ ಡಿಸೆಂಬರ್ 25 ರಂದು ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಗ್ರಹ ಸಚಿವ ಅಮಿತ್ ಶಾ ವಿಶ್ವ ರತ್ನ ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ಅವಮಾನ ಮಾಡಿರುವುದನ್ನು ವಿರೋಧಿ , ಅಮಿತ್ ಶಾ ನನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಬ್ರಹತ್ತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದೇ ಡಿಸೆಂಬರ್ 25 ಬುಧವಾರದಂದು ಬೆಳಿಗ್ಗೆ 10-30 ಘಂಟೆಗೆ ಸರಿಯಾಗಿ ಪ್ರತಿಭಟನೆಯನ್ನು ಆಯೋಜನೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ದಲಿತ ಸಂಘರ್ಷ ಸಮಿತಿಯ ಎಲ್ಲಾ ಕಾರ್ಯಕರ್ತರು ಮತ್ತು ಉಡುಪಿ ಜಿಲ್ಲೆಯ ಪ್ರಗತಿಪರ ಚಳುವಳಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ಮತ್ತು ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಪ್ರಕಟನೆಯಲ್ಲಿ ಮನವಿಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *