×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ ಬಂಟರ ಸಂಘದ  ನೇತೃತ್ವದಲ್ಲಿ ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ ಎಂ ಆರ್ ಜಿ ಟ್ರೋಫಿ 2024,

ಪಡುಬಿದ್ರಿ: ಬಂಟ ಸಮುದಾಯವನ್ನು ಒಗ್ಗೂಡಿಸಿ ಯುವ ಶಕ್ತಿಯ ಕ್ರೀಡಾ ಸ್ಫೂರ್ತಿಗೆ ಪ್ರೇರಣೆ ನೀಡಿ ಪ್ರೋತ್ಸಾಹಿಸುವ ನಿಟ್ಟಿನಿಂದ ಬಂಟರ ಭವನದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ದಿ. ರಮೇಶ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ಡಿ. 29 ರಂದು ಎಂ ಆರ್ ಜಿ ಟ್ರೋಫಿ 2024, ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ ಆಯೋಜಿಸಲಾಗಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿ ಹೇಳಿದರು. ಹಲವಾರು ವಿಶೇಷತೆಗಳ ವೈಭವದಿಂದ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ಆಕರ್ಷಕ ಪಥಸಂಚಲನ, ವಾಲಿಬಾಲ್, ತ್ರೋಬಾಲ್, ಕಬಡ್ಡಿ, ಹಗ್ಗ ಜಗ್ಗಾಟ ಪಂದ್ಯಾಟಗಳು ನಡೆಯಲಿದೆ. ವಿಜೇತರಿಗೆ ಆಕರ್ಷಕ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುವುದು. ಜಾತಿ, ಮತ, ಭೇದವಿಲ್ಲದೆ ಸಮಾಜದ ಸರ್ವರಿಗೂ ನಿರಂತರ ಸಹಾಯ ಹಸ್ತ ನೀಡುತ್ತಾ ಸಮಾಜ ಸೇವೆಗೆ ತನ್ನನ್ನು ತಾನು ಸಮರ್ಪಿಸುತ್ತಾ ಅಶಕ್ತರಿಗೆ ಆಶ್ರಯದಾತರಾಗಿ ಕೊಡುಗೈ ದಾನಿಯಾಗಿ ತನ್ನ ಸಮಾಜ ಸೇವೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳೊಂದಿಗೆ ಪ್ರತಿಷ್ಟಿತ ಮಂಗಳೂರು ವಿಶ್ವ ವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಹಾಗೂ ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪುರಸ್ಕೃತರಾಗಿರುವ ಬಂಟ ಸಮಾಜದ ಕಣ್ಮಣಿ ಎಂ. ಆರ್.ಜಿ ಗ್ರೂಫ್ ನ ಸಿ ಎಂ ಡಿ ಡಾ.ಕೆ. ಪ್ರಕಾಶ್ ಶೆಟ್ಟಿಯವರ ಸರ್ವ ಸಹಕಾರದ ಪ್ರಾಯೋಜಕತ್ವದಲ್ಲಿ ಈ ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ ಎಂ ಆರ್ ಜಿ ಟ್ರೋಫಿ 2024, ಎಂಬ ಲಾಂಛನದೊಂದಿಗೆ ನಡೆಯಲಿದೆ. ಡಾ ಕೆ ಪ್ರಕಾಶ್ ಶೆಟ್ಟಿಯವರಿಂದ ಉದ್ಘಾಟನೆಗೊಳ್ಳಲಿರುವ ಈ ಕ್ರೀಡಾ ಕೂಟದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ದೀಪ ಪ್ರಜ್ವಲನೆ ಮಾಡಲಿರುವರು. ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಬಂಟ ಕ್ರೀಡಾಕೂಟದ ಧ್ವಜಾರೋಹಣ ಮಾಡಲಿರುವರು. ಕ್ರೀಡಾಕೂಟದ ಆರಂಭದಲ್ಲಿ ಆಕರ್ಷಕ ಬಂಟ ಪಥ ಸಂಚಲನಾ ನಡೆಯಲಿದ್ದು, ಕರ್ನಾಟಕ ಸರಕಾರದ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದ‌ರ್ ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ಹಾಗೂ ವಿಜೇತರಿಗೆ ಎಂ ಆರ್ ಜಿ ಟೋಫಿಯೊಂದಿಗೆ ನಗದು ಬಹುಮಾನ ನೀಡಿ ಗೌರವಿಸಲಾಗುವುದು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು 2024 ನೇ ಸಾಲಿನ ಸುವರ್ಣ ಕರ್ನಾಟಕ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಹೇರಂಭ ಇಂಡಸ್ಟ್ರೀಸ್ ಮುಂಬೈನ ಸಿ.ಎಂ.ಡಿ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಬಂಟ ಸಾಧಕ ಪ್ರಶಸ್ತಿ ಪುರಸ್ಕಾರ ನೀಡಿ ಸನ್ಮಾನಿಸಲಿರುವರು. ಯು.ಪಿ.ಸಿ.ಎಲ್ (ಅದಾನಿ) ಅಧ್ಯಕ್ಷರಾದ ಕಿಶೋರ್ ಆಳ್ವರು ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ ನೀಡಲಿರುವರು. ವಿ.ಕೆ. ಗ್ರೂಫ್ಟ್ ಮುಂಬೈ ಯ ಸಿ.ಎಂಡಿ ಕೆ. ಎಂ. ಶೆಟ್ಟಿಯವರು ವಾಲಿಬಾಲ್ ಕ್ರೀಡಾಂಗಣದ ಉದ್ಘಾಟನೆ ಮಾಡಲಿರುವರು. ಬಂಟರ ಸಂಘ ಮುಂಬೈ ಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ಹಗ್ಗ ಜಗ್ಗಾಟ ಕ್ರೀಡಾಂಗಣದ ಉದ್ಘಾಟನೆ ಮಾಡಲಿರುವರು. ಪುಣೆ ಉದ್ಯಮಿ ಚಂದ್ರಹಾಸ ಶೆಟ್ಟಿ ಪುಚೊಟ್ಟು ಬೀಡು ಇವರು ಕಬ್ಬಡ್ಡಿ ಕ್ರೀಡಾಂಗಣ ಉದ್ಘಾಟನೆ ಮಾಡಲಿರುವರು. ಬಂಟರ ಸಂಘ ಮುಂಬೈ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷರಾದ ಸ್ರೀಮತಿ ಉಮಾ ಕೃಷ್ಣ ಶೆಟ್ಟಿಯವರು ತ್ರೋಬಾಲ್ ಕ್ರೀಡಾಂಗಣದ ಉದ್ಘಾಟನೆ ಮಾಡಲಿರುವರು. ವೈಭವದ ಕ್ರೀಡಾಜ್ಯೋತಿ ಮೆರವಣಿಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಿಂದ ಬೆಳಿಗ್ಗೆ 9 ಗಂಟೆಗೆ ಅತ್ಯಾಕರ್ಷಕ ವಾಹನ ಮೆರವಣಿಗೆಯೊಂದಿಗೆ ಕ್ರೀಡಾಜ್ಯೋತಿಯು ಪಡುಬಿದ್ರಿ ಪೇಟೆಯ ಮೂಲಕ ಕ್ರೀಡಾಂಗಣಕ್ಕೆ ಸಾಗಿ ಬರಲಿದೆ. ಪುಣೆ ಉದ್ಯಮಿಯಾದ ಸೀತಾರಾಮ ಶೆಟ್ಟಿ ಪುಚೊಟ್ಟು ಬೀಡು ಇವರು ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡಲಿರುವರು. ಮುಖ್ಯ ಅತಿಥಿಗಳಾಗಿ ಬಂಟರ ಮಾತೃ ಸಂಘ ಮಂಗಳೂರಿನ ಅಧ್ಯಕ್ಷ ಅಜಿತ್ ಕುಮಾ‌ರ್ ರೈ ಮಾಲಾಡಿ, ಬಂಟರ ಸಂಘ ಪುಣೆ ಅಧ್ಯಕ್ಷ ಸಂತೋಷ್ ಶೆಟ್ಟಿ ಪುಣೆ, ಇಂಟಕ್ ಕರ್ನಾಟಕದ ರಾಜಾಧ್ಯಕ್ಷರಾದ ರಾಕೇಶ್ ಮಲ್ಲಿ, ಸಿ.ಎಂ.ಡಿ ಯುನಿವರ್ಸಲ್‌ ಎಜ್ಯುಕೇಶನ್ ಸೆಂಟರ್ ಬೆಂಗಳೂರಿನ ಉಪೇಂದ್ರ ಶೆಟ್ಟಿ, ಕಾರ್ಕಳ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಮುನಿಯಾಲು ಉದಯ ಶೆಟ್ಟಿ, ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಕೆ. ಎಂ.ಎಫ್ ಮಂಗಳೂರಿನ ಅಧ್ಯಕ್ಷರಾದ ಸುಚರಿತ ಶೆಟ್ಟಿ ಹಾಗೂ ವಿಶೇಷ ಆಹ್ವಾನಿತರಾಗಿ ಕರ್ನಾಟಕ ಸರಕಾರದ ಮಾಜಿ ಸಚಿವಾರಾದ ವಿನಯಕುಮಾರ್ ಸೊರಕೆ, ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲ ಪೂಜಾರಿಯವರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮತ್ತು ರಾಜ್ಯ ಅಂತ‌ರ್ ರಾಜ್ಯ ಬಂಟರ ಸಂಘಗಳ ಅಧ್ಯಕ್ಷರುಗಳು ಹಾಗೂ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಎಂ ಆರ್ ಜಿ ಟ್ರೋಪಿ 2024 ಕ್ರೀಡಾಕೂಟದ ಪ್ರಾಯೋಜಕರಾದ ಮಹಾದಾನಿ ಡಾ.ಕೆ. ಪ್ರಕಾಶ್ ಶೆಟ್ಟಿಯವರ ಬಹುಮಾನ ವಿತರಣೆ ಮಾಡಲಿದ್ದಾರೆ. ಬಂಟ್ಸ್ ವೆರ್ ಟ್ರಸ್ಟ್ ನ ಅಧ್ಯಕ್ಷರಾದ ಎರ್ಮಾಳು ಶಶಿಧ‌ರ್ ಶೆಟ್ಟಿಯವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಅವರಿಂದ ಸಮಾರೋಪ ಭಾಷಣ ನಡೆಯಲಿದೆ. ಬಂಟ ಕ್ರೀಡಾರತ್ನ ಪ್ರಶಸ್ತಿ ಪ್ರಧಾನ ಅಂತರ್ ರಾಷ್ಟ್ರೀಯ ಕ್ರೀಡಾಪಟು ಹಾಗೂ ಕಂಬಳ ಸಮಿತಿಯ ಮಾಜಿ ಅಧ್ಯಕ್ಷರಾದ ರೋಹಿತ್ ಹೆಗ್ಡೆ ಎರ್ಮಾಳು ಹಾಗೂ ಕಂಬಳ ಕ್ಷೇತ್ರದಲ್ಲಿ ಅತ್ಯಲ್ಪ ಅವಧಿಯಲ್ಲಿ ಅತ್ಯಧಿಕ ಪ್ರಶಸ್ತಿಗಳನ್ನು ಪಡೆದಂತಹ ಎರ್ಮಾಳು ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ಮತ್ತು ಅಂತರ್ ರಾಷ್ಟ್ರೀಯ ಈಜುಪಟು ನೈಶಾ ಶೆಟ್ಟಿ ಇವರಿಗೆ ಆರ್ಗಾನಿಕ್ ಇಂಡಸ್ಟ್ರೀಸ್ ಮುಂಬೈನ ಸಿ.ಎಂ.ಡಿ ತೋನ್ಸೆ ಆನಂದ ಶೆಟ್ಟಿ ಯವರು ಬಂಟ ಕ್ರೀಡಾ ರತ್ನ ಪ್ರಶಸ್ತಿ ಪ್ರಧಾನಿಸಲಿರುವರು. ಕ್ರೀಡಾಳುಗಳಿಗೆ ಪ್ರೋತ್ಸಾಹಧನ ವಿತರಣೆ ಬಂಟ ಸಮಾಜದ ಯುವ ಶಕ್ತಿಯ ಕ್ರೀಡಾ ಸ್ಫೂರ್ತಿಗೆ ಪ್ರೇರಣೆ ನೀಡುವ ಉದ್ದೇಶದಿಂದ ನಡೆಯಲ್ಪಡುವ ಈ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಹಾಗೂ ವಿಧಾನ ಸಭಾ ಪರಿಷತ್ ಸದಸ್ಯರಾದ ಐವನ್ ಡಿ ಸೋಜ ಇವರಿಂದ ಉದಯೋನ್ಮುಖ ಕ್ರೀಡಾಳುಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಶ್ಯಾಮಿಲಿ ಟ್ರಸ್ಟ್ ನ ಪ್ರವರ್ತಕರಾದ ಡಾ. ಜಿ ಶಂಕರ್ ರವರು ಆಕರ್ಷಕ ಬಂಟ ಪಥ ಸಂಚಲನಾ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಿರುವರು. ಪೆನಿನ್ನುಲಾ ಗ್ರೂಫ್ ಮುಂಬೈಯ ಸಿ .ಎಂ.ಡಿ ಕರುಣಾಕರ್ ಆರ್ ಶೆಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾದ ಮಿಥುನ್ ರೈ, ಬಂಟರ ಸಂಘ ಮುಂಬೈ ಯ ಕ್ರೀಡಾ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರು, ಮೆಡಿಸ್ಕಾನ್ ಮಂಗಳೂರಿನ ಖ್ಯಾತ ವೈದ್ಯರಾದ ಡಾ. ನವೀನ್ ಚಂದ್ರ ಶೆಟ್ಟಿ, ಜಾಗತಿಕ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾದ ಜಯಕರ ಶೆಟ್ಟಿ ಇಂದ್ರಾಳಿ, ಮಾತೃಭೂಮಿ ಕೆ. ಕೋ.ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಉಳ್ಳೂರು ಮೋಹನ್ ದಾಸ್ ಶೆಟ್ಟಿ, ರಾಮಕೃಷ್ಣ ಕೆ. ಕೋ.ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಜಯರಾಜ್ , ASPEN SCZ ಪಡುಬಿದ್ರಿ ಸೀನಿಯರ್ ಜನರಲ್ ಮ್ಯಾನೇಜರ್ ಅಶೋಕ್ ಕುಮಾ‌ರ್ ಶೆಟ್ಟಿ, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಹೇಮನಾಥ ಶೆಟ್ಟಿ ಕಾವು, ಪಟ್ಟ ಫೌಂಡೇಶನ್ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಗೌರವಾಭಿನಂದನೆ ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ ಎಂ.ಆರ್.ಜಿ ಟ್ರೋಫಿ 2024 ರ ಮಹಾ ಪ್ರಾಯೋಜಕರು ಬಂಟರ ಭವನದ ಹವಾ ನಿಯಂತ್ರಿತ ವ್ಯವಸ್ಥೆಯೊಂದಿಗೆ ಸಮಗ್ರ ಅಭಿವೃದ್ಧಿಗೆ ಕಾರಣಕರ್ತರಾದ ಕೊಡುಗೈದಾನಿ ಡಾ. ಕೆ.ಪ್ರಕಾಶ್ ಶೆಟ್ಟಿಯವರಿಗೆ ಹಾಗೂ ಪಡುಬಿದ್ರಿ ಬಂಟರ ಸಂಘಕ್ಕೆ ನಿರಂತರ ಸಹಾಯ ಹಸ್ತ ನೀಡುತ್ತಾ ಸಮಾಜದ ಪ್ರೀತಿ ಪಾತ್ರರಾಗಿರುವ ಸಹಕಾರ ರತ್ನ ಡಾ. ಎಮ್.ಎನ್.ರಾಜೇಂದ್ರ ಕುಮಾರ್ ರವರಿಗೆ ಬಂಟರ ಸಂಘದ ಸರ್ವ ಸದಸ್ಯರ ಹಾಗು ಸಮಸ್ತ ಯುವ ಬಂಟ ಕ್ರೀಡಾಳುಗಳ ಸಂಪ್ರೀತಿಯ ಗೌರವಾಭಿನಂದನೆ ನಡೆಯಲಿದೆ. ಹಾಗೂ ಕ್ರೀಡಾಂಗಣದ ಸ್ಥಳದಾನಿ ಮುಂಬೈ ಉದ್ಯಮಿ ಕರುಣಾಕರ ಪೂಜಾರಿಯವರನ್ನು ಗೌರವಿಸಲಾಗುವುದು. ಆಕರ್ಷಣೀಯ ಉಪಸ್ಥಿತಿ: ಮುಂಗಾರು ಮಳೆ ಖ್ಯಾತಿಯ ಗೋಲ್ಡನ್ ಸ್ಟಾರ್ ಗಣೇಶ್ ಹಾಗು ಕನ್ನಡ ತುಳು ಚಲನಚಿತ್ರದ ಕಲಾವಿದರ ಮತ್ತು ಟೀಂ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್ ಈ ಕ್ರೀಡಾಕೂಟದಲ್ಲಿ ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಡಿಸ್ಟ್ರಿಕ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ ಹಾಗೂ ಪಡುಬಿದ್ರಿ ಸಿ.ಎ. ಬ್ಯಾಂಕ್ ಅಧ್ಯಕ್ಷ ವೈ ಸುಧೀರ್ ಕುಮಾರ್, ಸಿರಿಮುಡಿ ದತ್ತಿನಿಧಿ ಪಡುಬಿದ್ರಿ ಇದರ ಅಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ,ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ರವೀಂದ್ರ ನಾಥ ಜಿ ಹೆಗ್ಡೆ, ಸುರೇಶ್ ಶೆಟ್ಟಿ ಗುಂಡ್ಲಾಡಿ, ನವೀನ್ ಚಂದ್ರ ಗೌರವ ಉಪಸ್ಥಿತರಿದ್ದು, ವಿವಿಧ ಸಂಘ ಸಂಸ್ಥೆಗಳ ಮತ್ತು ರಾಜ್ಯ ಅಂತರ್ ರಾಜ್ಯ ಬಂಟರ ಸಂಘಗಳ ಅಧ್ಯಕ್ಷರುಗಳು ಹಾಗೂ ಗಣ್ಯಾತಿ ಗಣ್ಯರು ಉಪಸ್ಥಿತರಿರುವರು. ಪಡುಬಿದ್ರಿ ಬಂಟರ ಸಂಘದ ಸದಸ್ಯರಿಂದ ನೃತ್ಯ ವೈವಿಧ್ಯ ಹಾಗೂ ವಿಜಯ ಕಲಾವಿದರಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಅಮ್ಮು.. ಆಮುಂಡರಾ..? ಹಾಸ್ಯಮಯ ಸಾಂಸಾರಿಕ ತುಳು ನಾಟಕ ಜರುಗಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್‌ ಶೆಟ್ಟಿ ಹೇಳಿದರು. ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷರಾದ ಎರ್ಮಾಳು ಶಶಿಧರ್ ಶೆಟ್ಟಿ, ಸಿರಿಮುಡಿ ದತ್ತಿ ನಿಧಿ ಸ್ಥಾಪಕ ಅಧ್ಯಕ್ಷ ಸಾಂತೂರು ಭಾಸ್ಕರ್ ಶೆಟ್ಟಿ, ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಕ್ರೀಡಾ ಸಂಚಾಲಕ ವಿನಯ ಶೆಟ್ಟಿ ಎರ್ಮಾಳು, ಯುವ ವಿಭಾಗದ ಅಧ್ಯಕ್ಷ ನವೀನ್ ಎನ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷ ಜ್ಯೋತಿ ಶೆಟ್ಟಿ, ಕಾಪು ತಾಲೂಕು ಕ್ರೀಡಾಧಿಕಾರಿ ರಿತೇಶ್ ಶೆಟ್ಟಿ, ಸಾಂಸ್ಕೃತಿಕ ಸಂಚಾಲಕ ಜಯ ಶೆಟ್ಟಿ ಪದ್ರ, ಕ್ರೀಡಾ ಸಹ ಸಂಚಾಲಕಿ ಶರ್ಮಿಳಾ ಶೆಟ್ಟಿ, ಕಾರ್ಯಕ್ರಮ ಸಂಯೋಜಕ ಸತೀಶ್ ಶೆಟ್ಟಿ ಗುಡ್ಡೆಚ್ಚಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *